Author: Mallikarjun

ಇಂದು ಪತ್ನಿ ಚನ್ನಮ್ಮ ಸಮಾಧಿ ಸ್ಥಳಕ್ಕೆ ದೇವೇಗೌಡರ ಭೇಟಿ

ಹಾಸನ: ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರು ಜು. 26ರ ಭಾನುವಾರ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿರುವ ಧರ್ಮಪತ್ನಿ ಶ್ರೀಮತಿ ಚನ್ನಮ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಜು. 30ರ ಗುರುವಾರ ಶ್ರೀಮತಿ ಚನ್ನಮ ಅವರ 11ನೇ ದಿನದ ಕಾರ್ಯ…

ಡಿ.ಕೆ. ಶಿವಕುಮಾರ್ ಹೆಸರು ಹೇಳದೇ ಇದ್ದದ್ದು ಉದ್ದೇಶಪೂರ್ವಕವಲ್ಲ

ಹಾಸನ: ಶ್ರೀಮತಿ ಚನ್ನಮ್ಮ ಅವರ ಅಂತ್ಯಕ್ರಿಯೆ ವೇಳೆ ರಾಜ್ಯ ಸರ್ಕಾರ ನೀಡಿದ ಗೌರವ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಉದ್ದೇಶಪೂರ್ವಕವಾಗಿ ಹೇಳದೇ ಇರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಪಡಿಸಿದರು. ನಿನ್ನೆ ನಾನು ಮೈಕ್…

ಇಂದು ಹಾಸನ, ಹೊಳೆನರಸೀಪುರದ ಶಾಲಾ-ಕಾಲೇಜಿಗೆ ರಜೆ

ಹಾಸನ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಅವರ ಧರ್ಮಪತ್ನಿ ಶ್ರೀಮತಿ ಚನ್ನಮ್ಮ ಅವರ ನಿಧನ ಹಿನ್ನಲೆಯಲ್ಲಿ ಜು. 20ರ ಸೋಮವಾರ ಹಾಸನ ಹಾಗೂ ಹೊಳೆನರಸೀಪುರ ತಾಲ್ಲೂಕಿನ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಅಂತ್ಯಕ್ರಿಯೆಗೆ ದೇಶದ, ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚಿನ…

ಹಾಸನ ಜಿಲ್ಲೆಯಲ್ಲಿ ಜುಲೈ 19ರಿಂದ 20ರ ವರೆಗೆ ಮದ್ಯ ಮಾರಾಟ ನಿಷೇಧ

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚನ್ನಮ್ಮ (84) ಅವರ ನಿಧನ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಆದೇಶ ಹೊರಡಿಸಿದ್ದಾರೆ. ಜುಲೈ 18ರಂದು ಚನ್ನಮ್ಮ ಅವರು ನಿಧನರಾಗಿದ್ದು,…

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ‌ ಅವರ ಧರ್ಮಪತ್ನಿ ಚೆನ್ನಮ್ಮ ನಿಧನ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ(85) ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಚೆನ್ನಮ್ಮ ಅವರನ್ನ ಬುಧವಾರ ರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ…

ಜನರಿಗೆ ಮೋಸ: ಗಜಲಕ್ಷ್ಮಿ ಗೋಲ್ಡ್ ಫೈನಾನ್ಸ್ ಮಾಲೀಕ ಮಂಜುನಾಥ್ ಅರೆಸ್ಟ್

ಹಾಸನ: ಚಿನ್ನದ ಮೇಲೆ ಸಾಲ ಕೊಡಿಸುವುದಾಗಿ ಸಾರ್ವಜನಿಕರಿಂದ ಚಿನ್ನಾಭರಣ ಪಡೆದು ಮೋಸ ಮಾಡಲು ಯತ್ನಿಸಿದ್ದ ಆಸಾಮಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯ ಮಂಜುನಾಥ್‌ ಬಂಧಿತ ಆರೋಪಿ. ಗಜಲಕ್ಷ್ಮಿ ಗೋಲ್‌್ಡ ಫೈನಾನ್‌್ಸ ಹೆಸರಿನಡಿ 2 ಕೆ.ಜಿ. ಚಿನ್ನ ಅಡಮಾನ…

ಡಾ. ಬಿ.ಆರ್. ಯುವರಾಜ್ ಹಾಸನ ನೂತನ ಡಿಎಚ್‌ಒ 

ಚನ್ನರಾಯಪಟ್ಟಣ: ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಾಗಿದ್ದ ಡಾ. ಬಿ.ಆರ್. ಯುವರಾಜ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ)ಯಾಗಿ ನೇಮಕಗೊಂಡಿದ್ದಾರೆ. ಡಾ. ಯುವರಾಜ್ ಅವರು ಚನ್ನರಾಯಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ ಅವಧಿಯಲ್ಲಿ ಆಸ್ಪತ್ರೆಯ ಆಡಳಿತ ವ್ಯವಸ್ಥೆ ಸುಧಾರಣೆ, ಸಾರ್ವಜನಿಕರಿಗೆ…

ಸೆಸ್ಕಾಂ ಸಿಬ್ಬಂದಿ ಮೇಲೆ ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರು

ಸಕಲೇಶಪುರ: ವಿದ್ಯುತ್ ಲೈನ್ ದುರಸ್ತಿ ಕಾರ್ಯ ಮುಗಿಸಿ ವಾಪಸಾಗುತ್ತಿದ್ದ ಸೆಸ್ಕಾಂ ಸಿಬ್ಬಂದಿ ವಾಹನದ ಮೇಲೆ ಒಂಟಿ ಸಲಗ ದಾಳಿ ನಡೆಸಿದ ಘಟನೆ ತಾಲೂಕಿನ ಯಸಳೂರು ಶಾಖೆ ವ್ಯಾಪ್ತಿಯ ಲಕ್ಕುಂದ ಗ್ರಾಮದ ಸಮೀಪ ಮಂಗಳವಾರ ತಡರಾತ್ರಿ ಸಂಭವಿಸಿದೆ. ಯಸಳೂರು ಶಾಖೆಯ ಶಾಖಾಧಿಕಾರಿ ಮಂಜುನಾಥ್…

ಸಕಲೇಶಪುರ: ಪ್ರವಾಸಿಗರಿಗೆ ಖಡಕ್ ಎಚ್ಚರಿಕೆ ಕೊಟ್ಟ ತಹಶೀಲ್ದಾರ್

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಧಾರಾಕಾರ ಮಳೆ ಹಾಗೂ ಬಿರುಗಾಳಿ ಮುಂದುವರಿದಿರುವ ಹಿನ್ನೆಲೆಯಲ್ಲಿ ಭೂಕುಸಿತ, ಪ್ರವಾಹ ಮತ್ತು ಇತರ ಪ್ರಕೃತಿ ವಿಕೋಪಗಳ ಅಪಾಯ ಹೆಚ್ಚಾಗಿದೆ. ಸಾರ್ವಜನಿಕರ ಜೀವ ಹಾಗೂ ಆಸ್ತಿ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತಾಲೂಕು…

ಖ್ಯಾತ ಚಿತ್ರ ಕಲಾವಿದ ಕೆ.ಟಿ. ಶಿವಪ್ರಸಾದ್ ನಿಧನ

ಹಾಸನ: ನಾಡಿನ ಖ್ಯಾತ ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ, ರೈತ ಸಂಘ ಮತ್ತು ದಲಿತ ಸಂಘರ್ಷ ಸಮಿತಿಯ ಹಿರಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್ (77) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ…