ಹಾಸನ: ಸಕಲೇಶಪುರ ಪಟ್ಟಣದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸೂಪರ್‌ವೈಸರ್ ಉಮಾದೇವಿ ಅವರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಆದರ್ಶ್ ಎಂಬುವವರ ಮಗಳ ಗೃಹಲಕ್ಷ್ಮಿ (ಭಾಗಲಕ್ಷ್ಮಿ) ಬಾಂಡ್ ನೀಡಲು ₹1,100 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಎದುರಾಗಿದೆ. ಈ ಕುರಿತು ಆದರ್ಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ದೂರಿನ ಆಧಾರದ ಮೇಲೆ ಇಂದು ಸಿಡಿಪಿಓ ಕಚೇರಿಯಲ್ಲಿ ಲಂಚದ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಉಮಾದೇವಿಯನ್ನು ವಶಕ್ಕೆ ಪಡೆದಿದ್ದಾರೆ.
ಇದೇ ವೇಳೆ ಗೃಹಲಕ್ಷ್ಮಿ ಬಾಂಡ್‌ಗಾಗಿ ಅರ್ಜಿ ಸಲ್ಲಿಸಿದ್ದ ಒಟ್ಟು 74 ಮಂದಿಯಿಂದಲೂ ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಿಚಾರ ಬಹಿರಂಗವಾಗಿದೆ. ಆದರೆ ಈ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿದ್ದು ಏಕೈಕವಾಗಿ ಆದರ್ಶ್ ಮಾತ್ರ.
ಲೋಕಾಯುಕ್ತ ಇನ್ಸ್‌ಪೆಕ್ಟರ್ ಶಿಲ್ಪಾ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಪ್ರಕರಣದ ಮುಂದಿನ ತನಿಖೆ ಮುಂದುವರಿದಿದೆ.
