ಹಾಸನ: ಬೇಲೂರು ತಾಲ್ಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ರೈತ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ರಾಜಶೆಟ್ಟಿ (65) ಮೃತಪಟ್ಟ ರೈತನಾಗಿದ್ದು, ಇಂದು ಬೆಳಿಗ್ಗೆ ತಮ್ಮ ತೋಟಕ್ಕೆ ತೆರಳಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಸೊಂಡಿಲಿನಿಂದ ಎತ್ತಿ ಬಿಸಾಡಿ ಬಳಿಕ ತುಳಿದು ಕೊಂದುಹಾಕಿದ ಘಟನೆ ನಡೆದಿದೆ.
ಘಟನೆಯ ನಂತರ ಮೃತದೇಹದ ಸಮೀಪದಲ್ಲೇ ಕಾಡಾನೆ ನಿಂತಿರುವುದರಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Leave a Reply

Your email address will not be published. Required fields are marked *