ಹಾಸನ: ಸಿಬಿಎಸ್ಇ ಪರೀಕ್ಷೆಯಲ್ಲಿ ವಿದ್ಯಾನಗರ ಕ್ರೈಸ್ಟ್ ಶಾಲೆ ಶೇಕಡಾ 100 ರಷ್ಟು ಫಲಿತಾಂಶ ಪಡೆದಿದೆ. ಶಾಲೆಯ ವಿದ್ಯಾರ್ಥಿ ಸಮರ್ಥ್ ಶ್ರೀನಿವಾಸ್ 96.2% ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಶಾಲೆಯಿಂದ ಪರೀಕ್ಷೆ ಬರೆದಿದ್ದ ಒಟ್ಟು 108 ವಿದ್ಯಾರ್ಥಿಗಳ ಪೈಕಿ 65 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ 37 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಶಾಲೆಯ ಪ್ರಾಂಶುಪಾಲ ಅನುಮೋನ್ ಜೋಸೆಫ್, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
