ಹಾಸನ: ಜಿಲ್ಲೆಯ ಗಂಡಸಿ ಹೋಬಳಿ ನಿಲಗುಂದ ಹೊಸಳ್ಳಿ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದ್ದು, ಹಸು ತೊಳೆಯಲೆಂದು ಕೆರೆ ಬಳಿ ತೆರಳಿದ್ದ ಇಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.
ಮೃತರನ್ನು ಸೋಮನಹಳ್ಳಿಯ ಪ್ರಭಾಕರ್ (45) ಹಾಗೂ ಪ್ರತೀಕ್ (10) ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ಮನೆಗೆ ಕೃಷಿ ಚಟುವಟಿಕೆ ನಿಮಿತ್ತ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಘಟನೆಯಿಂದ ಸ್ಥಳೀಯರಲ್ಲಿ ಆಘಾತ ವ್ಯಕ್ತವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತರ ಅಗಲಿಕೆಯಿಂದ ಕುಟುಂಬಕ್ಕೆ ಅಪಾರ ನಷ್ಟ ಉಂಟಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
