ಹಾಸನ: ಆಲೂರು ತಾಲ್ಲೂಕಿನ ಮಾದಿಹಳ್ಳಿ ಸಮೀಪ ಭಾರೀ ಮಳೆಯ ವೇಳೆ ಸಂಭವಿಸಿದ ಸಿಡಿಲು ದುರ್ಘಟನೆಯಲ್ಲಿ ವೃದ್ದೆಯೊಬ್ಬರು ಮೃತಪಟ್ಟಿದ್ದಾರೆ.
ಮಳೆ ಜೊತೆ ಗುಡುಗು-ಸಿಡಿಲು ಸಂಭವಿಸುತ್ತಿದ್ದ ಸಂದರ್ಭದಲ್ಲಿ ಮರದ ಕೆಳಗೆ ನಿಂತಿದ್ದ ನೀಲಮ್ಮ (70) ಅವರಿಗೆ ಸಿಡಿಲು ಬಡಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯಿಂದಾಗಿ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ದುಃಖ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *