ಹಾಸನ: ಹೊಳೆನರಸೀಪುರದಲ್ಲಿ ಪೆಟ್ರೋಲ್ ಬಂಕ್ ಮಾಲೀಕನ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ ನಡೆದಿದೆ.
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ, ಬೈಕ್‌ನಲ್ಲಿ ಹೆಲ್ಮೆಟ್ ಧರಿಸಿ ಬಂದ ಮೂವರು ಅಪರಿಚಿತರು ಏಕಾಏಕಿ ದಾಳಿ ನಡೆಸಿದ್ದಾರೆ. ಲಾಂಗು-ಮಚ್ಚುಗಳಿಂದ ಪೆಟ್ರೋಲ್ ಬಂಕ್ ಮಾಲೀಕ ಮಂಜೇಗೌಡ ಅವರ ಮೇಲೆ ಹಲ್ಲೆ ನಡೆಸಲಾಗಿದೆ.
ಘಟನೆ ಹೊಳೆನರಸೀಪುರ ತಾಲೂಕಿನ ನಾಗಲಾಪುರ ಕ್ರಾಸ್ ಬಳಿ ನಡೆದಿದೆ. ಮಂಜೇಗೌಡ ಅವರು ಮೂಲತಃ ಜೋಡಿಗುಬ್ಬಿ ಗ್ರಾಮದವರಾಗಿದ್ದು, ಪೆಟ್ರೋಲ್ ಬಂಕ್, ಬಾರ್ ಹಾಗೂ ಟ್ರ್ಯಾಕ್ಟರ್ ಶೋರೂಮ್ ನಡೆಸುತ್ತಿದ್ದರು.
ಪ್ರಾಥಮಿಕ ಮಾಹಿತಿ ಪ್ರಕಾರ, ಸುಮಾರು ₹45 ಲಕ್ಷ ಹಣದ ವ್ಯವಹಾರ ಸಂಬಂಧ ಈ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಮಂಜೇಗೌಡ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ದುಷ್ಕರ್ಮಿಗಳು ಮುಖ ಗುರುತು ಸಿಗದಂತೆ ಹೆಲ್ಮೆಟ್ ಧರಿಸಿ ದಾಳಿ ನಡೆಸಿ ಪರಾರಿಯಾಗಿದ್ದಾರೆ.

Leave a Reply

Your email address will not be published. Required fields are marked *