ಹಾಸನ: ರೈಲಿನಲ್ಲಿ ಅಕ್ರಮವಾಗಿ ಸಾಗಣೆಯಾಗುತ್ತಿದ್ದ ಸುಮಾರು 5 ಸಾವಿರ ರೂ. ಮೌಲ್ಯದ ಮದ್ಯವನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರೈಲ್ವೆ ಆವರಣ ಹಾಗೂ ರೈಲುಗಳಲ್ಲಿ ಅಕ್ರಮವಾಗಿ ನಿಷೇಧಿತ ವಸ್ತುಗಳ ಸಾಗಾಣಿಕೆಯನ್ನು ತಡೆಯುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿರುವ ಆಪರೇಷನ್ ಸತರ್ಕ ಅಭಿಯಾನದ ಅಂಗವಾಗಿ ಕಾರ್ಯಾಚರಣೆ ನಡೆಸಲಾಯಿತು.
ರೈಲು ಸಂಖ್ಯೆ 17310 ವಾಸ್ಕೋ ಡ ಗಾಮಾ – ಯಶವಂತಪುರ ಎಕ್ಸ್ ಪ್ರೆಸ್ ರೈಲಿನಲ್ಲಿ ಅಜ್ಜಂಪುರ ಮತ್ತು ಅರಸೀಕೆರೆ ರೈಲು ನಿಲ್ದಾಣಗಳ ಮಧ್ಯೆ ಮದ್ಯ ಪತ್ತೆಯಾಗಿದೆ.
ಸಾಮಾನ್ಯ ಬೋಗಿಯ ಬಳಿ ಮಾಲೀಕರಿಲ್ಲದ ಒಂದು ಪ್ಲಾಸ್ಟಿಕ್ ಚೀಲ ಪತ್ತೆಯಾಯಿತು. ಬೋಗಿಯ ಪ್ರಯಾಣಿಕರನ್ನು ವಿಚಾರಿಸಿದಾಗ ಯಾರೂ ಸಹ ಆ ಚೀಲ ತಮ್ಮದೆಂದು ಒಪ್ಪಿಕೊಳ್ಳಲಿಲ್ಲ. ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಚೀಲವನ್ನು ವಶಪಡಿಸಿಕೊಂಡು ಪರಿಶೀಲಿಸಲಾಯಿತು.
ಪರಿಶೀಲನೆ ವೇಳೆ ವಿವಿಧ ಬ್ರಾಂಡ್ ಗಳ ಒಟ್ಟು 12 ಮದ್ಯದ ಬಾಟಲಿಗಳು ಪತ್ತೆಯಾಗಿದ್ದು, ಒಟ್ಟು ಮೌಲ್ಯ ಸುಮಾರು 5,123 ರೂ. ಎಂದು ಅಂದಾಜಿಸಲಾಗಿದೆ.

Leave a Reply

Your email address will not be published. Required fields are marked *