ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಬೆಳಗುಲಿ ಗ್ರಾಮದ ಸಮೀಪ ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಮೃತರನ್ನು ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ಕಾಳೇನಹಳ್ಳಿ ಗ್ರಾಮದ ಪ್ರದೀಪ್ (22) ಹಾಗೂ ಅರುಣ್ (21) ಎಂದು ಗುರುತಿಸಲಾಗಿದೆ.
ಇಬ್ಬರೂ ಶುಂಠಿ ಕೆಲಸಕ್ಕಾಗಿ ಈ ಭಾಗಕ್ಕೆ ಬಂದಿದ್ದು, ಕೆಲಸ ಮುಗಿಸಿ ವಾಪಸ್ ಊರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ನುಗ್ಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪರಿಚಿತ ವಾಹನದ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
