ಹಾಸನ: ನಗರದ ಜಿಲ್ಲಾ ಕಸಾಪ ಭವನ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಪಾಂಚಜನ್ಯ ಹಿಂದೂ ಗಣಪತಿ ವಿಗ್ರಹದ ವಿಸರ್ಜನೆ ಇಂದು ಜರುಗಲಿದೆ.
ಮಧ್ಯಾಹ್ನ 1 ಗಂಟೆಗೆ ಶೋಭಾಯಾತ್ರೆ ಆರಂಭವಾಗಲಿದ್ದು, ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶೋಭಾಯಾತ್ರೆಯಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ, ಶಾಸಕರು ಸಿಮೆಂಟ್ ಮಂಜು ಹಾಗೂ ಎಚ್.ಕೆ. ಸುರೇಶ್ ಭಾಗಿಯಾಗಲಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಲಿರುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇದೇ ವೇಳೆ ಮುಂಜಾಗ್ರತಾ ಕ್ರಮವಾಗಿ ಹಾಸನ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಈ ಕುರಿತು ಆದೇಶ ಹೊರಡಿಸಿದ್ದಾರೆ.