ಆಲೂರು: ತಾಲ್ಲೂಕಿನ ಕೆ.ಹೊಸಕೋಟೆ ಹೋಬಳಿ ಮಾದೀಹಳ್ಳಿ ಗ್ರಾಮದ ನಿವೃತ್ತ ಸಿಆರ್‌ಪಿಎಫ್ ಯೋಧ ರಂಗಸ್ವಾಮಿ (52) ಶುಕ್ರವಾರ ನಿಧನರಾಗಿದ್ದಾರೆ.
ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರಿಗೆ ಪತ್ನಿ ಹಾಗು ಇಬ್ಬರು ಮಕ್ಕಳಿದ್ದಾರೆ. ಕುಂದೂರು ಹೋಬಳಿ ಮನಿಗನಹಳ್ಳಿ ಗ್ರಾಮದಲ್ಲಿ ಶನಿವಾರ ಅಂತ್ಯಕ್ರಿಯೆ ನೆರವೇರಲಿದೆ.
ಗುಂಡಿನ ಚಕಮಕಿಯಲ್ಲಿ ಗಾಯ:
ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಉಗ್ರವಾದಿಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಗಾಯಗೊಂಡು ಬೆನ್ನುಹುರಿ ಹಾಗು ಜಠರ ಸಮಸ್ಯೆಗೆ ತುತ್ತಾಗಿದ್ದರು. ಐದು ವರ್ಷಗಳ ಕಾಲ ನವದೆಹಲಿಯ ಏಮ್ಸೌನಲ್ಲಿ ಚಿಕಿತ್ಸೆ ಪಡೆದು ಆರೋಗ್ಯದಲ್ಲಿ ಚೇತರಿಕೆ ಕಂಡುಬರದ ಹಿನ್ನಲೆಯಲ್ಲಿ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದರು. ಇತ್ತೀಚೆಗೆ ಅನಾರೋಗ್ಯ ಬಿಗಡಾಯಿಸಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು.
