ಹಾಸನ ಹೊಸ ಬಸ್ ನಿಲ್ದಾಣದೊಳಕ್ಕೆ ನುಗ್ಗಿದ ಬಸ್: ವ್ಯಕ್ತಿಗೆ ಗಾ
ಹಾಸನ: ಕಳೆದ ರಾತ್ರಿ ಸುಮಾರು 11 ಗಂಟೆಯ ವೇಳೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ (ಕೆಎ 21 ಎಫ್ 0151) ಹಾಸನ ನಗರದ ಹೊಸ ಬಸ್ ನಿಲ್ದಾಣದಲ್ಲಿ ಸ್ಟ್ಯಾಂಡ್‌ಗೆ ಪ್ರವೇಶಿಸುವ ಸಂದರ್ಭದಲ್ಲಿ ಚಾಲಕನು ಅತಿವೇಗವಾಗಿ ಬಸ್ ಚಾಲನೆ ಮಾಡಿದ್ದರಿಂದ ನಿಯಂತ್ರಣ ತಪ್ಪಿ ಬಸ್ ನಿಲ್ದಾಣದ ಒಳಭಾಗಕ್ಕೆ ನುಗ್ಗಿದೆ.
ಈ ವೇಳೆ ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಚಿಕ್ಕಮಗಳೂರು ಮೂಲದ ಮಂಜುನಾಥ್ ಅವರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಎದೆ ಹಾಗೂ ಎಡ ಕೈಗೆ ತೀವ್ರ ಗಾಯಗಳಾಗಿವೆ. ಗಾಯಾಳುವನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *