ಹಾಸನ: ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಅವರ ಧರ್ಮಪತ್ನಿ ಶ್ರೀಮತಿ ಚನ್ನಮ್ಮ ಅವರ ನಿಧನ ಹಿನ್ನಲೆಯಲ್ಲಿ ಜು. 20ರ ಸೋಮವಾರ ಹಾಸನ ಹಾಗೂ ಹೊಳೆನರಸೀಪುರ ತಾಲ್ಲೂಕಿನ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಅಂತ್ಯಕ್ರಿಯೆಗೆ ದೇಶದ, ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುತ್ತಾರೆ. ಈ ಸಂದರ್ಭದಲ್ಲಿ ಜನದಟ್ಟಣೆ, ಟ್ರಾಫಿಕ್ ಜಾಂ ಉಂಟಾದರೆ ಮಕ್ಕಳಿಗೆ ಸಮಸ್ಯೆಯಾಗುತ್ತದೆ ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *