ಅರಕಲಗೂಡು: ತಾಲ್ಲೂಕಿನ ದೊಡ್ಡಮಗ್ಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇಂಗ್ಲಿಷ್‌ ಉಪನ್ಯಾಸಕ ಸೋಮವಾರ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

ರಾಮನಾಥಪುರ ಹೋಬಳಿ ಶಿರದನಹಳ್ಳಿ ಗ್ರಾಮದ ಬಾಬುವರ್ಧನ್‌ (47) ಮೃತರು. ರಾಮನಾಥಪುರದಲ್ಲಿ ಹೊಸ ಮನೆ ನಿರ್ಮಿಸಿದ್ದ ಬಾಬುವರ್ಧನ್‌ ಎರಡು ತಿಂಗಳ ಹಿಂದಷ್ಟೇ ಗೃಹ ಪ್ರವೇಶ ಕಾರ್ಯ ಮುಗಿಸಿದ್ದರು. ಸೋಮವಾರ ಮಧ್ಯಾಹ್ನ ಹೊಸ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಕೊಣನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು.
ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಉಪನ್ಯಾಸಕರಾಗಿದ್ದ ಬಾಬುವರ್ಧನ್‌ ಅವರು ಅನೇಕ ಬಡ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ನೆರವಾಗಿದ್ದಾರೆ. ಇಂಗ್ಲಿಷ್‌ ವಿಷಯ ಬೋಧನೆಯಲ್ಲಿ ಪರಿಣತರಾಗಿದ್ದರು. ಆದರೆ ಕಳೆದ ಕೆಲ ದಿನಗಳ ಹಿಂದೆ ನಡೆದ ಅಹಿತಕರ ಘಟನೆಯಿಂದ ಅವರು ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ಪ್ರಕರಣ ಕುರಿತು ಕೊಣನೂರು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

Leave a Reply

Your email address will not be published. Required fields are marked *