ಸಕಲೇಶಪುರ: ಪಟ್ಟಣದ ತೇಜಸ್ವಿ ವೃತ್ತದಲ್ಲಿ ಸುಗಮ ಸಂಚಾರಕ್ಕೆ ಅಡಚಣೆಯಾಗಿದ್ದ ಫುಟ್‌ಪಾತ್ ಒತ್ತುವರಿಗಳನ್ನು ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಜೆಸಿಬಿ ಮೂಲಕ ತೆರವುಗೊಳಿಸಿದರು.

ತೇಜಸ್ವಿ ವೃತ್ತದಲ್ಲಿ ಹೆಚ್ಚಿನ ಸಂಚಾರ ದಟ್ಟಣೆ ಹಾಗೂ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ವೃತ್ತದ ಅಗಲೀಕರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಇದರ ಭಾಗವಾಗಿ ಫುಟ್‌ಪಾತ್ ಒತ್ತುವರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿ ಪುರಸಭಾ ಮುಖ್ಯಾಧಿಕಾರಿ ಮಹೇಶ್ವರಪ್ಪ
ಸುಮಾರು 20 ದಿನಗಳ ಹಿಂದೆ ಜಿಲ್ಲಾಧಿಕಾರಿಗಳು ಸಕಲೇಶಪುರ ಪಟ್ಟಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ತೇಜಸ್ವಿ ವೃತ್ತದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅಪಘಾತಗಳು ಸಂಭವಿಸುತ್ತಿರುವುದನ್ನು ಗಮನಿಸಿದ್ದರು. ವೃತ್ತದ ಅಗಲೀಕರಣಕ್ಕೆ ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಕ್ರಮ ಕೈಗೊಂಡು ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದರು.

ಜಿಲ್ಲಾಧಿಕಾರಿಗಳ ಸೂಚನೆಯಂತೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ತೇಜಸ್ವಿ ವೃತ್ತದ ಅಗಲೀಕರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ವೃತ್ತದ ಸುತ್ತಮುತ್ತಲಿನ ಫುಟ್‌ಪಾತ್ ಹಾಗೂ ಅದರ ಮೇಲಿನ ಒತ್ತುವರಿಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಹೇಳಿದರು.

ಸ್ಥಳದಲ್ಲಿ ಯಾವುದೇ ರೀತಿಯ ಹಣದಿಂದ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೋಲಿಸ್ ಬಂದೋಬಸ್ತ್ ಕೈಕೊಳ್ಳಲಾಗಿತ್ತು

Leave a Reply

Your email address will not be published. Required fields are marked *