ಹಾಸನ: ಹಾಸನದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಹೆಚ್ಚುವರಿ 63.34 ಕೋಟಿ ರೂ. ಅನುದಾನ ನೀಡಲು ಸಚಿವ ಸಂಪುಟ ಒಪ್ಪಿಗೆ ದೊರೆತಿದ್ದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಹಾಗೂ ಸಂಸದ ಶ್ರೇಯಸ್ ಪಟೇಲ್ ಸಂತಸ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಹಾಸನದಲ್ಲಿ ಸರಣಿ ಹೃದಯಾಘಾತಗಳಿಂದ ಸಾವುಗಳು ಸಂಭವಿಸಿದಾಗ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ತುರ್ತು ಅವಶ್ಯಕತೆಯನ್ನು ಸಂಸದ ಶ್ರೇಯಸ್ ಮನಗಂಡು, ಈ ಬಗ್ಗೆ ಕಂದಾಯ ಸಚಿವರು ಮತ್ತು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದರು.
ನಮ್ಮ ಮನವಿಯನ್ನು ಪುರಸ್ಕರಿಸಿ ಆಸ್ಪತ್ರೆಗೆ ಹಣ ಬಿಡುಗಡೆಯಾಗಿರುವುದು ಸಂತಸ ತಂದಿದೆ ಎಂದು ಶ್ರೇಯಸ್ ಪಟೇಲ್ ತಿಳಿಸಿದ್ದಾರೆ. ಈ ಅನುದಾನದಿಂದ ಆಸ್ಪತ್ರೆಯ ಬಾಕಿ ಕಾಮಗಾರಿಯು ಶೀಘ್ರವಾಗಿ ಪೂರ್ಣಗೊಳ್ಳಲಿದೆ ಎಂದಿದ್ದಾರೆ.