ಹಾಸನ: ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕಚೇರಿಯ ಸೂಪರಿಂಟೆಂಡೆಂಟ್ ವೇಣುಗೋಪಾಲ್ ರಾವ್ (46) ಶುಕ್ರವಾರ ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾದರು.
ಬೆಳಿಗ್ಗೆ 5 ಗಂಟೆ ಸುಮಾರಿಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಣುಗೋಪಾಲ್ ರಾವ್ ಅವರು ಈ ಹಿಂದೆ ಲೋಕಾಯುಕ್ತ ಬಲೆಗೆ ಬಿದ್ದು ಅಮಾನತುಗೊಂಡಿದ್ದರು. ಬಳಿಕ ಇತ್ತೀಚೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಸೂಪರಿಂಟೆಂಡೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮೃತರಿಗೆ ಪತ್ನಿ ಹಾಗೂ ಮಗಳು ಇದ್ದಾರೆ.

Leave a Reply

Your email address will not be published. Required fields are marked *