ಹಾಸನ: ಯೋಗಗುರು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹೆಚ್.ಬಿ. ರಮೇಶ್ ಅವರ ನಿವಾಸಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಭೇಟಿ ನೀಡಿ, ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
ರಮೇಶ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಶ್ರೀಗಳು, ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದರು.
ಹಿರಿಯ ಜಾನಪದ ತಜ್ಞ ಹಂಪನಹಳ್ಳಿ ತಿಮ್ಮೇಗೌಡ, ರಮೇಶ್ ಅವರ ಪುತ್ರ ಹಾಗೂ ಸಾಹಿತಿ ನಾಗೇಶ್, ಬ್ರಾಹ್ಮಣ ಮಹಾಸಭಾ ಕಾರ್ಯದರ್ಶಿ ವೇಣುಗೋಪಾಲ್, ಜೈನ ಸಮಾಜದ ಮುಖಂಡ ಸುಕೇಶ್ ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.
