ಹಾಸನ: ಹೃದಯಾಘಾತದಿಂದ 27 ವರ್ಷದ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಗರದ ವಿಜಯನಗರದಲ್ಲಿ ನಡೆದಿದೆ.
ಮೃತನನ್ನು ಮೂಲತಃ ಕುದುರುಗುಂಡಿ ಗ್ರಾಮದ, ವಿಜಯನಗರ ನಿವಾಸಿ ನಂದನ್ ಎಂದು ಗುರುತಿಸಲಾಗಿದೆ. ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ನಂದನ್, ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದು, ಪತ್ನಿ ಹಾಗೂ ಮಗಳೊಂದಿಗೆ ವಿಜಯನಗರದಲ್ಲಿ ವಾಸವಾಗಿದ್ದರು.
ಇಂದು ಬೆಳಿಗ್ಗೆ ಮನೆಯಲ್ಲಿ ಇದ್ದ ವೇಳೆ ನಂದನ್‌ಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಕುಟುಂಬಸ್ಥರು ಆಟೋದಲ್ಲಿ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ನಂದನ್ ಮೃತಪಟ್ಟಿದ್ದರು ಎನ್ನಲಾಗಿದೆ.
ಯುವಕನ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Leave a Reply

Your email address will not be published. Required fields are marked *