ಹಾಸನ: ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಸೆ.6 ರಂದು ಬೆಳಗ್ಗೆ 10.30 ರಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜನಸ್ಪಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾರ್ವಜನಿಕ ಕುಂದು ಕೊರತೆ ಅಹವಾಲಗಳನ್ನು ದಾಖಲಿಸಲು ಸರ್ಕಾರವು ಏಕೀಕೃತ ಸಾರ್ವಜನಿಕ ದೂರು ನಿವಾರಣಾ ತಂತ್ತ್ರರಾಂಶ (Integrated Public Redressal Grievance System) ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗಿರುತ್ತದೆ. ಸಾರ್ವಜನಿಕರು ಖುದ್ದು ಹಾಜರಾಗಿ ಮನವಿಗಳನ್ನು ನೀಡಲು ತೆರೆಯಲಾದ ಕೌಂಟರ್‌ಗಳಲ್ಲಿ ಅರ್ಜಿಗಳನ್ನು ದಾಖಲಿಸಿ, ಟೋಕನ್ ನಂಬರ್‌ಗಳನ್ನು ಸ್ವೀಕರಿಸಿ ತಮ್ಮ ಅಹವಾಲನ್ನು ಸಲ್ಲಿಸಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ.