filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (0.21907371, 0.60453135);sceneMode: null;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: off;albedo: ;confidence: ;motionLevel: -1;weatherinfo: null;temperature: 36;

ಹಾಸನ: ಅರಣ್ಯ ಸಂರಕ್ಷಣೆಗಾಗಿ ಪ್ರಾಣದ ಹಂಗು ತೊರೆದು ಕೆಲಸ ಮಾಡಿದ ಅರಣ್ಯ ಸಿಬ್ಬಂದಿಯನ್ನು ಸ್ಮರಿಸುವುದು ಪ್ರಜ್ಞಾವಂತ ನಾಗರಿಕರ ಕರ್ತವ್ಯ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ಹೇಮಾವತಿ ಹೇಳಿದರು.
ನಗರದ ಅರಣ್ಯ ಭವನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ಮಾತನಾಡಿ, ಅರಣ್ಯ ಸಂರಕ್ಷಣೆ ಮನುಷ್ಯನ ಉಳಿಯುವಿಕೆಯ ಭಾಗ.‌ ಮೊದಲು ಸಕಾಲದಲ್ಲಿ ಮಳೆ ಆಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ವೈಯುಕ್ತಿಕ ಲಾಭಕ್ಕಾಗಿ ಪರಿಸರ ಹಾಳು ಮಾಡುತ್ತಿದ್ದೇವೆ. ಕಾಡು ಪ್ರಾಣಿಗಳು ನಾಡಿಗೆ ಬರುವಂತೆ ನಾವೇ ಮಾಡಿದ್ದೇವೆ. ಈ ಲೋಪದಲ್ಲಿ ಅಭಿವೃದ್ಧಿ ಜೊತೆಗೆ ವೈಯಕ್ತಿಕ ಹಿತಾಸಕ್ತಿಯು ಅಡಗಿದೆ. ಅರಣ್ಯ ಸಂರಕ್ಷಣೆಗಾಗಿ ಜೀವದ ಹಂಗು ತೊರೆದು ಕುಟುಂಬವನ್ನು ಮರೆತು ಮಡಿದ ಸಿಬ್ಬಂದಿಯನ್ನು ಸ್ಮರಿಸುವುದು ನಮ್ಮ ಜವಾಬ್ದಾರಿ ಎಂದರು.
ಕಾಡುಗಳ್ಳ ವೀರಪ್ಪನ್ ನಿಂದ ಡಿಸಿಎಫ್ ಶ್ರೀನಿವಾಸ್ ಅವರು ಹತರಾದ ಬಳಿಕ ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ನೌಕರರ ಸಮಸ್ಯೆ ಏನೆಂಬುದು ನಮ್ಮ ಅರಿವಿಗೆ ಬಂತು ಎಂದರು.
2013ರಿಂದ ಅರಣ್ಯ ಹುತಾತ್ಮರ ದಿನಾಚರಣೆ ಪ್ರಾರಂಭಿಸಿತು. ಪ್ರತಿಯೊಬ್ಬರನ್ನೂ ನೆನೆಸುವ ದಿನವಾಗಿದೆ. ಅರಣ್ಯ ನಾಶ, ಒತ್ತುವರಿ ಕಾರ್ಯ ನಡೆಯುತ್ತಿದೆ. ಜನರಿಗೆ ತಿಳಿವಳಿಕೆ ಮೂಡಿಸುವ ಕಾರ್ಯಕ್ರಮಗಳು ಆಗ್ಬೇಕು.
ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮಾತನಾಡಿ, ಜೀವವನ್ನು ತೊರೆದು ಅರಣ್ಯಕ್ಕಾಗಿ ಪ್ರಾಣ ಬಿಟ್ಟವರ ಬಗ್ಗೆ ಹೆಮ್ಮೆಯಾಗುತ್ತದೆ. ಪರಿಸರ ಸಮತೋಲನಕ್ಕೆ ಅರಣ್ಯ ಅತ್ಯವಶ್ಯ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಜಿ.ಕೆ. ದಾಕ್ಷಾಯಿಣಿ, ಅರಣ್ಯ ಸಂರಕ್ಷಣಾಧಿಕಾರಿ ಏಡುಕುಂಡಲು ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್. ಪೂರ್ಣಿಮಾ, ಎಸ್ಪಿ ಮೊಹಮ್ಮದ್ ಸುಜಿತಾ, ಡಿಸಿಎಫ್ ಸೌರಭ್ ಕುಮಾರ್, ಅಧಿಕಾರಿಗಳಾದ ಕಾವ್ಯಶ್ರಿ, ಶಾಂತಕುಮಾರ್, ಮೋಹನ್ ಕುಮಾರ್ ಇತರರು ಇದ್ದರು.
ಗಾಳಿಯಲ್ಲಿ ಮೂರು ಸುತ್ತಿನ ಗುಂಡು ಹಾರಿಸಿ ಮಡಿದ ಅರಣ್ಯ ಸಿಬ್ಬಂದಿಗೆ ಗೌರವ ಸೂಚಿಸಲಾಯಿತು.

Leave a Reply

Your email address will not be published. Required fields are marked *