ಹಾಸನ: ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ ಟ್ರಕ್ ಹರಿದು ಹತ್ತು ಮಂದಿ ಮೃತಪಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅವರು ಗ್ರಾಮಕ್ಕೆ ಭೇಟಿ ನೀಡಿ ದುಃಖಿತ ಕುಟುಂಬಗಳನ್ನು ಸಮಾಧಾನಪಡಿಸಿದರು. ಅವರ ಆಗಮನದ ಸಂದರ್ಭದಲ್ಲಿ ನೂರಾರು ಮಂದಿ ಸ್ಥಳೀಯರು ಕೂಡ ಗುಂಪುಗೂಡಿ ಪರಿಸ್ಥಿತಿಯನ್ನು ವೀಕ್ಷಿಸಿದರು.
ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ಕಾಮಗಾರಿ ವೀಕ್ಷಿಸಿದರು. ಶಾಸಕರಾದ ಎಚ್.ಡಿ.ರೇವಣ್ಣ ಮತ್ತು ಎಚ್.ಪಿ.ಸ್ವರೂಪ್‌ಪ್ರಕಾಶ್ ಉಪಸ್ಥಿತರಿದ್ದರು.
