ಹಾಸನ: ಮೊಸಳೆಹೊಸಳ್ಳಿ ದುರ್ಘಟನೆಗೆ ಕಾರಣನಾದ ಕ್ಯಾಂಟರ್ ಚಾಲಕ ಭುವನೇಶ್ ಆರೋಗ್ಯದಲ್ಲಿ ಏರುಪೇರಾಗಿದೆ ಎಂದಿದ್ದು ಆ ಹಿನ್ನೆಲೆಯಲ್ಲಿ ಆತನನ್ನು ಹಿಮ್ಸ್ ಗೆ ದಾಖಲಿಸಲಾಗಿದೆ.
ಶುಕ್ರವಾರ ರಾತ್ರಿ ಹಾಸನದಿಂದ ಹೊಳೆನರಸೀಪುರ ಕಡೆಗೆ ಸಾಗುತ್ತಿದ್ದ ಕ್ಯಾಂಟರ್ ಮೊಸಳೆಹೊಸಳ್ಳಿಯಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಬರುತ್ತಿದ್ದವರ ಮೇಲೆ ಹರಿದಿತ್ತು.
ಚಾಲಕ ಭುವನೇಶ್‌ನನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದರು. ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಭುವನೇಶ್ ನನ್ನು ಇಂದು ಗೊರೂರು ಪೊಲೀಸರು ವಶಕ್ಕೆ ಪಡೆಯಲು ನಿರ್ಧರಿಸಿದ್ದರು.
ಮೆಡಿಕಲ್ ಟೆಸ್ಟ್‌ಗೆ ಹಿಮ್ಸ್ ಆಸ್ಪತ್ರೆಗೆ ಕರೆತಂದಾಗ ನನಗೆ ಅನಾರೋಗ್ಯವಿದೆ ಚಿಕಿತ್ಸೆ ಪಡೆಯಬೇಕು ಎಂದಿದ್ದಾನೆ.
ಹೀಗಾಗಿ ಆತನನ್ನು ಹಿಮ್ಸ್ ಗೆ ದಾಖಲಿಸಲಾಗಿದೆ. ಆರೋಗ್ಯ ಸುಧಾರಣೆ ನಂತರ ಪೊಲೀಸರು ವಶಕ್ಕೆ ಪಡೆಯಲಿದ್ದಾರೆ.
