ಹಾಸನ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಕೋಟ್ಯಂತರ ರೂ. ಕೊಳ್ಳೆ ಹೊಡೆದ ಪ್ರಕರಣದ ಪ್ರಮುಖ ಆರೋಪಿ ಎಂ.ಕೆ. ರಾಜೇಶ್ ನನ್ನು ಸಕಲೇಶಪುರ ನಗರ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಕಳೆದ ಎರಡು ತಿಂಗಳಿಂದ ಭಾರಿ ಸದ್ದು ಮಾಡುತ್ತಿರುವ ಹಗರಣದ ಪ್ರಮುಖ ಸೂತ್ರಧಾರ ಕೊನೆಗೂ ಸಿಕ್ಕಿ ಬಿದ್ದಿದ್ದಾನೆ.
ಎಫ್ ಐಆರ್ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ರಾಜೇಶ್ ಪೊಲೀಸರ ಕಣ್ತಪ್ಪಿಸಿ ಓಡಾಡಿಕೊಂಡಿದ್ದ. ಅರಸೀಕೆರೆಯ ಮನೆಯೊಂದರಲ್ಲಿ ಅಡಗಿ ಕುಳಿತ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ಏನಿದು ಹಗರಣ:
ನಕಲಿ ದಾಖಲೆಗಳ ಸೃಷ್ಟಿಸಿ ವಸತಿ ಯೋಜನೆಯಲ್ಲಿ ಅಕ್ರಮ ಎಸಗಿರುವ ಆರೋಪ ಇದಾಗಿದೆ. ಯೋಜನೆ ಲಾಗಿನ್ ದುರುಪಯೋಗ ಮಾಡಿಕೊಂಡು ಸರ್ಕಾರದ ಅನುದಾನ ದುರುಪಯೋಗ ಪಡಿಸಿಕೊಂಡಿದ್ದಾನೆ ಎನ್ನಲಾಗಿದೆ.