ಹಾಸನ: ಬೇಲೂರು ತಾಲ್ಲೂಕಿನ ಮಲಸಾವರ ಗ್ರಾಮದಲ್ಲಿ ಬೆಳ್ಳಂ ಬೆಳಿಗ್ಗೆ ಮೂರು ಕಾಡಾನೆಗಳು ಎಂಟ್ರಿಕೊಟ್ಟು ಆತಂಕ ಸೃಷ್ಟಿಸಿವೆ.
ಗ್ರಾಮದೊಳಗೆ ಆಹಾರಕ್ಕಾಗಿ ಅಲೆದಾಡಿದ ಸಲಗಗಳು ರೈತರ ಜಮೀನುಗಳಿಗೆ ನುಗ್ಗಿ ಭತ್ತ, ಕಾಫಿ, ಬಾಳೆ, ಅಡಿಕೆ ಬೆಳೆಗಳಿಗೆ ಹಾನಿ ಉಂಟುಮಾಡಿವೆ. ಮುಂಜಾನೆ ಹೊತ್ತಿನಲ್ಲಿ ಮನೆಗಳಿಂದ ಹೊರಬರಲು ಸ್ಥಳೀಯರು ಭಯಗೊಂಡಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಗ್ರಾಮದ ಬಳಿಯ ಕಾಫಿ ತೋಟದಲ್ಲಿ ಈಗಾಗಲೇ ಮೂರು ಕಾಡಾನೆಗಳು ಬೀಡುಬಿಟ್ಟಿರುವ ಮಾಹಿತಿ ದೊರೆತಿದ್ದು, ಹಾವಳಿಯಿಂದ ಗ್ರಾಮಸ್ಥರು ತೀವ್ರ ಆತಂಕದಲ್ಲಿದ್ದಾರೆ. ಕೂಡಲೇ ಕಾಡಾನೆಗಳನ್ನು ಅರಣ್ಯಕ್ಕೆ ಹಿಂಡಬೇಕೆಂದು ಗ್ರಾಮಸ್ಥರು ಆಗ್ರಹ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಇಟಿಎಫ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
