ಹಾಸನ: ಮಹಾನಗರ ಪಾಲಿಕೆ ಮೇಯರ್ ಆಗಿ 8ನೇ ವಾರ್ಡ್ ಸದಸ್ಯ ಗಿರೀಶ್ ಚನ್ನವೀರಪ್ಪ ಅವಿರೋಧ ಆಯ್ಕೆಯಾಗಿದ್ದು ವಿಧಾನ ಪರಿಷತ್ ಸದಸ್ಯ ಡಾ.‌ಸೂರಜ್ ರೇವಣ್ಣ, ಶಾಸಕ ಸ್ವರೂಪ್ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು ಅಭಿನಂದನೆ ಸಲ್ಲಿಸಿದರು.
ಇದೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಸೂರಜ್ ರೇವಣ್ಣ, ಮಾಜಿ ಮೇಯರ್ ಎಂ.‌ಚಂದ್ರೇಗೌಡ ಅವರ ಬಗ್ಗೆ ನಮಗೆ ಸಿಟ್ಟಿಲ್ಲ. ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದರಿಂದ ಅವರ ವಿರುದ್ಧ ಕೊರ್ಟ್ ಗೆ ಹೋಗಬೇಕಾಯಿತು ಎಂದರು.
ರಾಷ್ಟ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿದ್ದರೂ ಸ್ಥಳೀಯವಾಗಿ ಒಮ್ಮತ ಸಾಧ್ಯವಾಗಿಲ್ಲ. ಇದನ್ನು ಮಾಜಿ ಶಾಸಕರು ಅರಿಯಬೇಕು. ಸಭೆ, ಸಮಾರಂಭಗಳಲ್ಲಿ ಸಂಸದರು ಸಹ ಮಾಜಿ ಶಾಸಕರೊಂದಿಗೆ ಕುಣಿದು ಕುಪ್ಪಳಿಸುತ್ತಾರೆ. ಇದು ಪವಿತ್ರ ಮೈತ್ರಿಯೋ ಅಪವಿತ್ರ ಮೈತ್ರಿಯೋ ಎಂಬುದನ್ನು ಜನರೇ ನಿರ್ಧರಿಸಲಿ ಎಂದರು.

Leave a Reply

Your email address will not be published. Required fields are marked *