ಹಾಸನ: ಹೊಳೆನರಸೀಪುರ ತಾಲ್ಲೂಕಿನ ಹಳ್ಳಿಮೈಸೂರು ಗ್ರಾಮದ ನಾಡಕಚೇರಿಯ ಗ್ರಾಮ ಲೆಕ್ಕಾಧಿಕಾರಿ ರಮೇಶ್, ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಪೌತಿ ಖಾತೆ ಮಾಡಿಕೊಡಲು 4000 ರೂ. ಲಂಚ ಕೇಳಿದ್ದ ರಮೇಶ್, ಮೊದಲು 1000 ರೂ. ಸ್ವೀಕರಿಸಿದ್ದ. ಇಂದು ಉಳಿದ 3000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.
ಮುದ್ದೇಗೌಡ ಎಂಬುವವರಿಂದ ಲಂಚ ಕೇಳಿದ ಹಿನ್ನೆಲೆಯಲ್ಲಿ ಬಲೆಯೊಡ್ಡಿದ ಲೋಕಾಯುಕ್ತ ಪೊಲೀಸರ ತಂಡದಲ್ಲಿ ಇನ್ಸ್‌ಪೆಕ್ಟರ್‌ಗಳಾದ ಶಿಲ್ಪಾ ಹಾಗೂ ಚಂದ್ರಶೇಖರ್ ನೇತೃತ್ವ ವಹಿಸಿದ್ದರು.