ಬೆಂಗಳೂರು: ಪ್ರಜಾವಾಣಿ ಪತ್ರಿಕೆಯ ಆರ್ಟಿಸ್ಟ್ ಶಶಿಕಿರಣ ದೇಸಾಯಿ ಅವರ ಪತ್ನಿ ಕಲ್ಪನಾ ನಗರದ ನಂದಿನಿ ಲೇಔಟ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಹಾಸನದ ಚಿತ್ಕಲಾ ಫೌಂಡೇಶನ್ ಅಧ್ಯಕ್ಷ, ಚಿತ್ರಕಲಾವಿದ ಬಿ.ಎಸ್. ದೇಸಾಯಿ ಅವರ ಸೊಸೆ ಕಲ್ಪನಾ ಮಗಳು ಡಿಂಪನಾ (4)ಸೇರಿದಂತೆ ಬಂಧು ಬಳಗವನ್ನ ಅಗಲಿದ್ದಾರೆ.
ಮಗಳನ್ನು ಶಾಲೆಗೆ ಬಿಟ್ಟು ಆಫೀಸ್ ಗೆ ದ್ವಿಚಕ್ರ ವಾಹನದಲ್ಲಿ ತೆರಳುವಾಗ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ನಡೆದಿದೆ. ಗಾಯಗೊಂಡ ಕಲ್ಪನಾ ಅವರನ್ನು ಕೂಡಲೇ ಕಣ್ವ ಸತ್ಯಸಾಯಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸೇರಿಸಿದರೂ ಪ್ರಯೋಜನವಾಗಲಿಲ್ಲ.
ಸಂಜೆ ಹಾಸನಕ್ಕೆ ಹೋಗಿ ಅಂತ್ಯಕ್ರಿಯೆ ಮಾಡುವುದಾಗಿ ಕುಟುಂಬದ ಸದಸ್ಯರು ತಿಳಿಸಿದ್ದಾರೆ.