ಹಾಸನ: ವಾಸದ ಮನೆಯಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟದಿಂದ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಆಲೂರು ತಾಲ್ಲೂಕಿನ ಹಳೆಯ ಆಲೂರು ಗ್ರಾಮದಲ್ಲಿ ನಡೆದಿದೆ.
ಸುದರ್ಶನ್ ಆಚಾರ್ (32) ಹಾಗೂ ಪತ್ನಿ ಕಾವ್ಯ (27) ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಪುಟ್ಟ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಫೋಟದ ರಭಸಕ್ಕೆ ಮನೆಯಲ್ಲಿ ಇರುವ ವಸ್ತುಗಳು ಸಂಪೂರ್ಣವಾಗಿ ಚೆಲ್ಲಾಪಿಲ್ಲಿಯಾಗಿವೆ. ಗಾಯಾಳುಗಳನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಯಿತು.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
