ಹಾಸನ: ಕರ್ನಾಟಕ ರಾಜ್ಯ ಬರಹಗಾರರ ಸಂಘದ ಹಾಸನ ಜಿಲ್ಲಾ ಘಟಕದ ಗೌರವಾಧ್ಯಕ್ಷರಾಗಿ ಪತ್ರಕರ್ತ ವೆಂಕಟೇಶ್ ಅವರನ್ನು ನೇಮಿಸಲಾಗಿದೆ.
ರಾಜ್ಯಾಧ್ಯಕ್ಷ ಮಧುನಾಯ್ಕ ಲಂಬಾಣಿ ಅವರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ರಾಜ್ಯ ಬರಹಗಾರರ ಸಂಘವು ಹೂವಿನಹಡಗಲಿಯಲ್ಲಿ ಕೇಂದ್ರ ಕಚೇರಿಯುಳ್ಳ ಒಂದು ನೋಂದಾಯಿತ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟನೆಯಾಗಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲೂ ಘಟಕಗಳನ್ನು ಹೊಂದಿದೆ. ಹೊರ ರಾಜ್ಯಗಳಲ್ಲಿಯೂ ಸಂಘವು ತನ್ನ ಚಟುವಟಿಕೆಗಳನ್ನು ವಿಸ್ತರಿಸಿಕೊಂಡಿದ್ದು, ವಿವಿಧ ಸಾಹಿತ್ಯ, ಸಂಗೀತ ಗಾಯನ, ನೃತ್ಯ ಮತ್ತು ಚಿತ್ರಕಲಾ ಸ್ಪರ್ಧೆಗಳನ್ನು ಆನ್‌ಲೈನ್ ಮೂಲಕ ಆಯೋಜಿಸುತ್ತಿದೆ. ವರ್ಷಕ್ಕೊಮ್ಮೆ ‘ನುಡಿ ವೈಭವ’ ಎಂಬ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಿರಂತರವಾಗಿ ಐದು ವರ್ಷಗಳಿಂದ ಸಂಘಟಿಸುತ್ತಿದೆ.
ವೆಂಕಟೇಶ್ ಅವರು ಉದಯ ವರದಿ ಪತ್ರಿಕೆಯ ಸಂಪಾದಕರಾಗಿದ್ದು, ಸಂಘಟಕರಾಗಿಯೂ ಸಕ್ರಿಯರಾಗಿದ್ದಾರೆ.