ಹಾಸನ: ರಾಜ್ಯದ ಪ್ರತಿಷ್ಠಿತ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಒಂದಾದ ತಾಲ್ಲೂಕಿನ ಮೊಸಳೆಹೊಸಹಳ್ಳಿ ಕಾಲೇಜು ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹೊಸ ಹಾಸ್ಟೆಲ್ ಕಟ್ಟಡ ನಿರ್ಮಾಣ ಹಂತದಲ್ಲಿರುವುದರಿಂದ ತಾತ್ಕಾಲಿಕವಾಗಿ ಬಿಸಿಎಂ ಹಾಸ್ಟೆಲ್‌ನಲ್ಲಿ ವಾಸವಾಗಿದ್ದಾರೆ.
ಆದರೆ ಇಲ್ಲಿ ಪದೇ ಪದೇ ನೀರಿನ ಪೂರೈಕೆ ವ್ಯತ್ಯಯ ಉಂಟಾಗುತ್ತಿದ್ದು, ಇಂದು ಸಂಪೂರ್ಣವಾಗಿ ನೀರು ಬಂದಿಲ್ಲದ ಹಿನ್ನೆಲೆ ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂರುಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವಾಸಿಸುತ್ತಿರುವ ಈ ಹಾಸ್ಟೆಲ್‌ನಲ್ಲಿ ದಿನನಿತ್ಯದ ಅಗತ್ಯಗಳಿಗೂ ನೀರಿಲ್ಲದೆ ಪರದಾಡುವ ಪರಿಸ್ಥಿತಿ ಉಂಟಾಗಿದೆ.
ಈ ಹಿಂದೆ ಹಲವಾರು ಬಾರಿ ಹಾಸ್ಟೆಲ್ ವಾರ್ಡನ್ ಗಮನಕ್ಕೂ ವಿಷಯ ತಂದಿದ್ದರೂ, ಸಮಸ್ಯೆ ಬಗೆಹರಿಯದೇ ಮುಂದುವರಿದಿರುವುದರಿಂದ ವಿದ್ಯಾರ್ಥಿನಿಯರು ಸಮಸ್ಯೆ ಪರಿಹರಿಸುವಂತೆ ಕೋರಿದ್ದಾರೆ.
