ಹಾಸನ: ಹಾಸನದ ಶಕ್ತಿ ದೇವತೆ ಹಾಸನಾಂಬ ಗರ್ಭಗುಡಿ ಬಾಗಿಲನ್ನು ಶಾಸ್ತ್ರೋಕ್ತವಾಗಿ ಮಧ್ಯಾಹ್ನ 1.06ಕ್ಕೆ ಮುಚ್ಚಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ,
ಶಾಸಕರಾದ ಎಚ್.ಪಿ.ಸ್ವರೂಪ್, ಸಿಮೆಂಟ್ ಮಂಜು, ಕೆ.ಎಂ.ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್, ಡಿಸಿ ಕೆ.ಎಸ್.ಲತಾಕುಮಾರಿ, ಡಿಐಜಿ ಬೋರಲಿಂಗಯ್ಯ, ಎಸ್ಪಿ ಮಹಮದ್ ಸುಜೇತಾ, ದೇವಾಲಯದ ಆಡಳಿತಾಧಿಕಾರಿ ಮಾರುತಿ ಸಮಕ್ಷಮದಲ್ಲಿ ಗರ್ಭಗುಡಿ ಬಾಗಿಲು ಹಾಕಲಾಯಿತು.
15 ದಿನಗಳ ಕಾಲ ನಡೆದ ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತ ತೆರೆ ಬಿದ್ದಿತು.
ಮುಂದಿನ ವರ್ಷ 29-10-2026 ರಿಂದ 11-11-2026ರ ವರೆಗೆ ಹಾಸನಾಂಬ ಗರ್ಭಗುಡಿ ಬಾಗಿಲು ತೆರೆಯಲಿದೆ.
