ಅರಕಲಗೂಡು: ಧಾರಾಕಾರ ಮಳೆಯಿಂದ ಮನೆ ಗೋಡೆ ಕುಸಿದು ವೃದ್ಧೆ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಮತ್ತಿಗೋಡು ಗ್ರಾಮದಲ್ಲಿ ನಡೆದಿದೆ.
ಜವರಮ್ಮ (61) ಮೃತರು. ಮಧ್ಯರಾತ್ರಿ 12.30ರ ಸಮಯದಲ್ಲಿ ಜೋರು ಮಳೆ ಸುರಿದು ಗೊಡೆ ಕುಸಿದಿದೆ. ಜಯಮ್ಮನಿಗೆ ಎರಡು ಗಂಡು ಮತ್ತು ಮೂರು ಹೆಣ್ಣು ಮಕ್ಕಳಿದ್ದಾರೆ. ಕೊಣನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ನಡೆಯಿತು.
ಸ್ಥಳಕ್ಕೆ ಶಾಸಕ ಎ. ಮಂಜು ಭೇಟಿ ನೀಡಿ ಪರಿಶೀಲಿಸಿದರು.
