ಹಾಸನ: ನಗರದ ಗೌರಿಕೊಪ್ಪಲು ಬಡಾವಣೆಯಲ್ಲಿ ತಿಮ್ಮೇಗೌಡ ಎಂಬುವವರಿಗೆ ಸೇರಿದ ಮನೆಯಲ್ಲಿ ಕಳ್ಳರು ಬೀಗ ಮುರಿದು ಒಳನುಗ್ಗಿ, 89 ಗ್ರಾಂ ಚಿನ್ನ, 670 ಗ್ರಾಂ ಬೆಳ್ಳಿ ಹಾಗೂ ₹2 ಲಕ್ಷ ನಗದು ಹಣ ದೋಚಿ ಪರಾರಿಯಾಗಿದ್ದಾರೆ.
ಮನೆಯಲ್ಲಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು ಕಳ್ಳರ ಕೈಗೆ ಸಿಕ್ಕಿದ್ದು, ಅವರು ಯಾವುದೇ ಸುಳಿವು ಬಿಟ್ಟಿಲ್ಲದೆ ಎಸ್ಕೇಪ್ ಆಗಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
