ಹಾಸನ: ಅರಕಲಗೂಡು ತಾಲೂಕಿನ ರಾಮನಾಥಪುರ ಹೋಬಳಿ, ಮಕೆಣಹಳ್ಳಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಬಸವರಾಜ ಮಕಾನಪುರ ಅವರು ಖಾತೆ ಬದಲಾವಣೆ ಪ್ರಕ್ರಿಯೆಗಾಗಿ ಲಂಚ ಪಡೆದಿರುವ ಆರೋಪದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕೆ.ಎಸ್. ಲತಾಮಣಿ ಅವರು ಅಮಾನತು ಮಾಡಲು ಆದೇಶ ಹೊರಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವೀಡಿಯೋ ಹಾಗೂ ತಹಶೀಲ್ದಾರ್ ಮತ್ತು ಉಪವಿಭಾಗಾಧಿಕಾರಿಗಳ ವರದಿ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ.
ವಿಡಿಯೋದಲ್ಲಿನ ದೃಶ್ಯಾವಳಿಗಳ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿತ ಲೆಕ್ಕಾಧಿಕಾರಿ ಗ್ರಾಮಸ್ಥರಿಂದ ಲಂಚ ಸ್ವೀಕರಿಸುತ್ತಿರುವುದು ಸ್ಪಷ್ಟವಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
