ರಾಮನಾಥಪುರ: ಅರಕಲಗೂಡು ತಾಲೂಕಿನ ರಾಮನಾಥಪುರ ಹೋಬಳಿಯ ಹಂಪಾಪುರ ಗ್ರಾಮದಲ್ಲಿ ಚಿರತೆ ದಾಳಿಗೆ ಹಸು ಮೃತಪಟ್ಟಿದೆ.
ಚಿರತೆ ದಾಳಿಯಿಂದ ಗ್ರಾಮಸ್ಥರು ಆತಂಕಗೊಂಡಿದ್ದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ.
ಗ್ರಾಮದ ಸುತ್ತಮುತ್ತ ಚಿರತೆ ನುಗ್ಗಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದೆ.
ನಿರಂತರ ದಾಳಿಯಿಂದ ರೈತರು ಜಮೀನುಗಳಿಗೆ ಹೋಗಲು ಎದುರಿಸುತ್ತಿದ್ದಾರೆ. ನಷ್ಟಕ್ಕೀಡಾದ ರೈತರಿಗೆ ಪರಿಹಾರ ವಿತರಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
