ಹಾಸನ: ಬೇಲೂರು ತಾಲ್ಲೂಕು ಹಳೇಬೀಡಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಡಿ. 22 ಹಾಗೂ 23ರಂದು ಶಾಂತಲಾ ಮಹೋತ್ಸವ ಹಾಗೂ ಆಳ್ವಾಸ್ ಸಾಂಸ್ಕೃತಿಕ ವೈಭವ ಹಮ್ಮಿಕೊಳ್ಳಲಾಗಿದೆ ಎಂದು ಶಾಂತಲ ಮಹೋತ್ಸವ ಸಮಿತಿ ಅಧ್ಯಕ್ಷ ಕೆ.ಎಸ್. ಲಿಂಗೇಶ್ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಶನಿವಾರ ಮಾತನಾಡಿ, ಡಿ. 22 ರಂದು ಶಾಂತಲಾ ವೇದಿಕೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅಂಬೇಡ್ಕರ್ ವೃತ್ತದಿಂದ ಹೊಯ್ಸಳ ವೃತ್ತದ ವರೆಗೆ ಮೆರವಣಿಗೆ ನಡೆಯಲಿದೆ. ಮಿಮಿಕ್ರಿ ಗೋಪಿ ಅವರು ಹಾಸ್ಯ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದರು.
ಡಿ. 23ರ ಮಂಗಳವಾರ ಸಂಜೆ 5 ಗಂಟೆ ವರೆಗೆ ರೈತ ದಿನಾಚರಣೆ ಬಳಿಕ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ನೆರವೇರಲಿದೆ ಎಂದರು.
10 ರಿಂದ 15 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸುತ್ತಲಿನ ಹಳ್ಳಿಗಳಿಂದ ಬರುವ ಜನರಿಗೆ ಅನುಕೂಲವಾಗಲು ಕೆಎಸ್ ಆರ್ ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ. ಕೃಷಿ ವಸ್ತು ಪ್ರದರ್ಶನ ಇರಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೋರಿದರು.
ಹಾಸನ ಜಿಲ್ಲೆಯ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುವ ಹೊಯ್ಸಳೋತ್ಸವ ಹಮ್ಮಿಕೊಳ್ಳುವಂತೆ ಸರ್ಕಾರಕ್ಕೆ ಎಷ್ಟೇ ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಹಾಗಾಗಿ ಪಕ್ಷಾತೀತವಾಗಿ ಶಾಂತಲಾ ಮಹೋತ್ಸವ ಆಯೋಜಿಸಿದ್ದೇವೆ. ಸರ್ಕಾರ ಇನ್ನಾದರೂ ನಮ್ಮ ಮನವಿಗೆ ಸ್ಪಂದಿಸಬೇಕು ಎಂದರು.
ಶಾಂತಲಾ ಮಹೋತ್ಸವ ಸಮಿತಿ ಕಾರ್ಯದರ್ಶಿ ಕುಮಾರ್, ಗಂಗೂರು ಶಿವಕುಮಾರ್, ಶಿವಣ್ಣ, ಶಂಕರ್ ನಾಗ್, ಭಾನು ಪ್ರಕಾಶ್ ಇದ್ದರು.
filter: 0; fileterIntensity: 0.0; filterMask: 0; hdrForward: 0; highlight: true; brp_mask:0;
brp_del_th:null;
brp_del_sen:null;
delta:null;
module: photo;hw-remosaic: false;touch: (-1.0, -1.0);sceneMode: 32768;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: -1;weatherinfo: null;temperature: 45; 