ಹಾಸನ: ಹೊಸ ವರ್ಷದ ಮೊದಲ ದಿನವೇ ಹಾಸನ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಡಿಕೆ ಕಟಾವು ಮಾಡಿ ಸಾಗಿಸುತ್ತಿದ್ದ ಬೊಲೆರೋ ಪಿಕಪ್ ವಾಹನದ ಟೈರ್ ಬ್ಲಾಸ್ಟ್ ಆಗಿ ವಾಹನ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯಗಳಾಗಿವೆ. ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅರಸೀಕೆರೆ ತಾಲ್ಲೂಕಿನ ಬಾಣಾವರ ಸಮೀಪದ ಚಿಕ್ಕಾರಹಳ್ಳಿ ಗೋಶಾಲೆ ಬಳಿ, ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ತಂಗ್ಲಿ ಗ್ರಾಮದ
ಶಬ್ಬೀರ್ (55), ತಿಮ್ಮಣ್ಣ (53), ಸಂಜಯ್ (45) ಎಂದು ಗುರುತಿಸಲಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ಹಾಸನ ಮೂಲದ ನೌಶದ್ ಅವರನ್ನು ಚಿಕಿತ್ಸೆಗಾಗಿ ಕಡೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *