ಚನ್ನರಾಯಪಟ್ಟಣ: ತಾಲ್ಲೂಕಿನ ಗುಲಸಿಂದ ಗ್ರಾಮದ ಬಳಿ ಬೆಂಗಳೂರು-ಹಾಸನ ಬೈಪಾಸ್ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸ್ಥಳದಲ್ಲಿಯೇ ಮೃತಪಟ್ಟಿದೆ.
ಸುಮಾರು 3 ರಿಂದ 4 ವರ್ಷ ವಯಸ್ಸಿನ ಗಂಡು ಚಿರತೆ ಇದಾಗಿದೆ. ಮಂಗಳವಾರ ಬೆಳಗಿನ ಜಾವ ಆಹಾರ ಹುಡುಕುತ್ತಾ ಇಲ್ಲವೇ ಮತ್ತೊಂದೆಡೆಗೆ ಸಾಗಲೆಂದು ಹೊರಟಿರುವ ಚಿರತೆಯು ರಸ್ತೆ ದಾಟುವ ವೇಳೆ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದೆ.
ಬೆಳಗ್ಗೆ 8 ಗಂಟೆಗೆ ಸಮಯದಲ್ಲಿ ಸ್ಥಳೀಯರು ಪೊಲೀಸ್ ಠಾಣೆ ಮತ್ತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಪರಿಶೀಲಿಸಿ ನಂತರ ಮುಂದಿನ ಕ್ರಮಕ್ಕಾಗಿ ಚಿರತೆಯನ್ನು ವಶಕ್ಕೆ ತೆಗೆದುಕೊಂಡಿರುತ್ತಾರೆ.
