ಅರಕಲಗೂಡು: ಸಾಲಬಾಧೆ ತಾಳಲಾರದೆ ಜ. 6 ರಂದು ವಿಷ ಸೇವಿಸಿದ್ದ ತಾಲ್ಲೂಕಿನ ಕೊಣನೂರು ಹೋಬಳಿಯ ವೆಂಕಟೇಶ್ವರ ಗ್ರಾಮದ ರೈತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ರೈತ ರಾಜೇಗೌಡ (60) ಮೃತರು.
ಸಿದ್ದಾಪುರ ಗೇಟ್‌ನಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ಸುಮಾರು 5 ಲಕ್ಷ ರೂ. ಸಾಲ ಪಡೆದುಕೊಂಡಿದ್ದು, ಜೊತೆಗೆ ಕೈ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸುವ ಒತ್ತಡ ಮತ್ತು ಆತಂಕದಿಂದ ಮನನೊಂದು ಆತ್ಮಹತ್ಯೆಗೆ ಮುಂದಾಗಿದ್ದರು.
ಹಾಸನದ ಹಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಬದುಕುಳಿಯಲು ಸಾಧ್ಯವಾಗಿಲ್ಲ. ಕೊಣನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *