ಹಾಸನ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ, ಹಾಸನ ಜಿಲ್ಲಾ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟ, ರೋಟರಿ ಕ್ಲಬ್ ಆಫ್ ಹಾಸನ್ ಟೈಗರ್ ಮತ್ತು ಅಮೋಘ್ ಸುದ್ದಿವಾಹಿನಿ ಅರ್ಪಿಸುವ, ಬೆಂಗಳೂರಿನ ಮನೋಜ್ಞ ನೃತ್ಯಕಲಾ ಕಲಾ ಅಕಾಡೆಮಿ ಪ್ರಸ್ತುತ ಪಡಿಸುವ ಕಾಡಿನ ಕೊಳಲು ಕುವೆಂಪು ಗೀತೆಗಳ ನೃತ್ಯ ರೂಪಕ ಫೆ.7 ರಂದು ನಗರದಲ್ಲಿ ನಡೆಯಲಿದೆ.
ಅಂದು ಸಂಜೆ 6 ಗಂಟೆಗೆ ನಗರದ ಎಂ.ಜಿ.ರಸ್ತೆಯಲ್ಲಿರುವ ಶ್ರೀ ಆದಿಚುಂಚನಗಿರಿ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ.
ಪತ್ರಕರ್ತರ ಸಂಘದ ಎಲ್ಲ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಮಾಜಿ ಅಧ್ಯಕ್ಷರು, ಸಂಪಾದಕರು, ಸರ್ವ ಸದಸ್ಯರು, ಜಿಲ್ಲೆಯ ಎಲ್ಲ ಪತ್ರಕರ್ತರು, ಶಾಲಾ ಶಿಕ್ಷಕರು, ರೋಟರಿ ಕ್ಲಬ್ ಸದಸ್ಯರು, ವಿದ್ಯಾರ್ಥಿಗಳು ಹಾಗೂ ಎಲ್ಲ ಸಾಹಿತ್ಯಾಸಕ್ತರು ಆಗಮಿಸಿ ಇದೇ ಮೊದಲ ಬಾರಿಗೆ ಆಯೋಜಿಸಿರುವ ವಿಶೇಷ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
