ಹಾಸನ: ಆಸ್ತಿ ವಿಚಾರಕ್ಕಾಗಿ ಸಾರಿಗೆ ಇಲಾಖೆ ನೌಕರನನ್ನು ಸುಟ್ಟು ಕೊಲೆ ಮಾಡಿರುವ ಘಟನೆ ಆಲೂರು ತಾಲ್ಲೂಕಿನಲ್ಲಿ ನಡೆದಿದೆ.
ರಾಜನಹಳ್ಳಿ ಗ್ರಾಮದ ವೀರಪ್ಪ (58) ಮೃತರು. ಕೆಎಸ್ ಆರ್ ಟಿಸಿ ಬಸ್ ಚಾಲಕರಾಗಿದ್ದ ವೀರಪ್ಪ ಸಿಐಟಿಯು ಸಕ್ರಿಯ ಕಾರ್ಯಕರ್ತರಾಗಿದ್ದರು.
ನೌಕರರ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿರುತ್ತಿದ್ದರು. ಆಸ್ತಿ ವಿಚಾರವಾಗಿ ಕಿಡಿಗೇಡಿಗಳು ಜೀವಂತ ಸುಟ್ಟು ಹಾಕಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಆಸ್ತಿ ವಿಚಾರವಾಗಿ ದಾಯಾದಿಗಳ ನಡುವೆ ಕಲಹವಿತ್ತು. ನಿನ್ನೆ ಕೋರ್ಟ್ ವಿಚಾರಣೆ ಮುಗಿಸಿಕೊಂಡು ಜಮೀನಿಗೆ ತೆರಳಿದ್ದಾಗ ಘಟನೆ ನಡೆದಿದೆ ಎನ್ನಲಾಗಿದೆ.
