ಹಾಸನ: ಫೆ. 18 ರಿಂದ ಮಾರ್ಚ್7ರ ವರೆಗೆ ಪಿಯುಸಿ ಮತ್ತು ಮಾ. 18 ರಿಂದ ಏ. 2ರ ವರೆಗೆ ಎಸ್ ಎಸ್ ಎಲ್ಸಿ ಪರೀಕ್ಷೆ ನಡೆಯಲಿದ್ದು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, 15782 ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 33 ಪರೀಕ್ಷಾ ಕೇಂದ್ರ ತೆರೆಯಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಮಕ್ಕಳಿಗೆ ಪರೀಕ್ಷಾ ಕೇಂದ್ರಕ್ಕೆ ತಲುಪಲು ಕೆಎಸ್ ಆರ್ ಟಿಸಿ ಬಸ್ ವ್ಯವಸ್ಥೆ ಮಾಡಿದ್ದು ಸಂಪೂರ್ಣ ಉಚಿತವಾಗಿರುತ್ತದೆ ಎಂದರು.
ಅದೇ ರೀತಿ ಎಸ್ ಎಸ್ ಎಲ್ ಸಿ ಮಕ್ಕಳು 20750 ಇದ್ದಾರೆ. ಜಿಲ್ಲಾದ್ಯಂತ 78 ಪರೀಕ್ಷಾ ಕೇಂದ್ರ ತೆರೆಯಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಬಮದೋಬಸ್ತ್ ಮಾಡಲಾಗುವುದು ಎಂದರು.
