ಹಾಸನ: ನಗರದ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಒಬ್ಬ ಯುವತಿ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಮೈಸೂರು-ಹಾಸನ ರಸ್ತೆಯಲ್ಲಿ ಬೈಕ್‌ನಲ್ಲಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ಹಂಪ್ಸ್ ಗೆ ಡಿಕ್ಕಿಯಾಗಿ ಕೆಳಗೆ ಬಿದ್ದಿದ್ದಾರೆ.
ಅಪಘಾತದ ರಭಸಕ್ಕೆ ಯುವತಿ ಪ್ರಿಯ (23) ಸ್ಥಳದಲ್ಲೇ ಮೃತಪಟ್ಟರೆ, ಸ್ವಾತಿ (24) ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
