ಹಾಸನ: ಚಲಿಸುತ್ತಿದ್ದ ಬುಲೆಟ್ ಬೈಕ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿದ ದುರ್ಘಟನೆ ಕಾಲೇಜು ಗೆಳತಿಯರಲ್ಲಿ ದಿಗ್ಭ್ರಮೆ ಮೂಡಿಸಿದೆ.
ಸ್ನೇಹಿತರ ಮದುವೆಗೆ ಶುಭಾಶಯ ಕೋರಲು ಪ್ರಿಯಾ ಹಾಗೂ ಆಕೆಯ ಗೆಳತಿ ಸ್ವಾತಿ ಬೈಕ್‌ನಲ್ಲಿ ತೆರಳಿದ್ದರು. ಮದುವೆ ಕಾರ್ಯಕ್ರಮ ಮುಗಿಸಿ ಮನೆಗೆ ವಾಪಸ್ಸು ಬರುತ್ತಿದ್ದ ವೇಳೆ ರಸ್ತೆ ಮಧ್ಯೆ ಹಂಪ್ಸ್ ಕಾಣದ ಕಾರಣ ಬೈಕ್ ನಿಯಂತ್ರಣ ತಪ್ಪಿ ಬಿದ್ದಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಪ್ರಿಯಾ ಸಾವನ್ನಪ್ಪಿದ್ದಾರೆ. ಖಾಸಗಿ ಕಾಲೇಜಿನಲ್ಲಿ ಎಂಸಿಎ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಪ್ರಿಯಾ, ಕುಟುಂಬದ ಏಕೈಕ ಮಗಳು ಎಂದು ತಿಳಿದುಬಂದಿದೆ. ತಂದೆ ಮಿಲಿಟರಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ತಾಯಿ ಕಷ್ಟಪಟ್ಟು ಮಗಳನ್ನು ಓದಿಸುತ್ತಿದ್ದರು. ಮಗಳ ಸಾವಿನಿಂದ ಕುಟುಂಬಸ್ಥರು ಭಾವುಕರಾಗಿದ್ದಾರೆ.
ಬೈಕ್ ಚಾಲನೆ ಮಾಡುತ್ತಿದ್ದ ಸ್ವಾತಿ ಗಂಭೀರ ಗಾಯಗೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗ…
