ಹಾಸನ: National Highway 75ರ ಗುಲಗಳಲೆ ಸಮೀಪ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಅತಿ ವೇಗದಿಂದ ಸಂಚರಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅಪಘಾತದ ತೀವ್ರತೆ ಸ್ಪಷ್ಟವಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ಮೃತರು ತಮಿಳುನಾಡು ಹಾಗೂ ಕೆಜಿಫ್ ಮೂಲದವರು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಬದುಕುಳಿದ ಒಬ್ಬರನ್ನು ತಕ್ಷಣ ಹಾಸನ ಜಿಲ್ಲಾಸ್ಪತ್ರೆಗೆ ಸಾಗಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಹಿನ್ನೆಲೆ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಸಂಕಷ್ಟ ಅನುಭವಿಸಿದರು.
