ಹಾಸನ: ನಗರ ಹೊರವಲಯದ ಗೆಂಡೆಕಟ್ಟೆ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಸಂಸದ ಶ್ರೇಯಸ್ ಪಟೇಲ್ ಭೇಟಿಯಾಗಿ ಹಲವು ವಿಚಾರಗಳ ಚರ್ಚಿಸಿದರು.
ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಸಂಚಾರದಿಂದ ರೈತರು ಮತ್ತು ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿವರವಾಗಿ ಮನವರಿಕೆ ಮಾಡಿಕೊಟ್ಟರು. ಬೆಳೆ ನಾಶ, ಜನರಲ್ಲಿ ಆತಂಕದ ವಾತಾವರಣ ಸೇರಿದಂತೆ ಅನೇಕ ವಿಚಾರಗಳನ್ನು ಸಚಿವರ ಗಮನಕ್ಕೆ ತರಲಾಯಿತು.
ಇದೇ ವೇಳೆ, ಕಾಡಾನೆಗಳ ನಿಯಂತ್ರಣ ಹಾಗೂ ತ್ವರಿತ ಕ್ರಮ ಕೈಗೊಳ್ಳುವ ಉದ್ದೇಶದಿಂದ ಹಾಸನ ಜಿಲ್ಲೆಯಲ್ಲಿ ಇಟಿಎಫ್ (Elephant Task Force) ಘಟಕವನ್ನು ತೆರೆಯುವಂತೆ ಸಚಿವರಿಗೆ ಮನವಿ ಸಲ್ಲಿಸಿದರು.
