ಹಾಸನ: ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾಗಲೇ ಮುಖ್ಯ ಶಿಕ್ಷಕನಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿರುವ ಘಟನೆ  ಜಿಲ್ಲೆಯಲ್ಲಿ ನಡೆದಿದೆ.

ಅರಕಲಗೂಡು ತಾಲ್ಲೂಕಿನ ಕೆಬ್ಬೆಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಕೇರಳಾಪುರ ಗ್ರಾಮದ ಸತೀಶ್ (53) ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ಏಕಾಏಕಿ ಅಸ್ವಸ್ಥಗೊಂಡು ತರಗತಿ ಕೊಠಡಿಯಲ್ಲೇ ಕುಸಿದು ಬಿದ್ದಿದ್ದಾರೆ.

ಘಟನೆ ಗಮನಿಸಿದ ವಿದ್ಯಾರ್ಥಿಗಳು ಹಾಗೂ ಸಹ ಶಿಕ್ಷಕರು ತಕ್ಷಣವೇ ಅವರ ನೆರವಿಗೆ ಧಾವಿಸಿದರೂ, ತೀವ್ರ ಹೃದಯಾಘಾತದಿಂದ ಶಾಲೆಯಲ್ಲಿಯೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿಗಳ ಎದುರೇ ಶಿಕ್ಷಕರಿಗೆ ಸಂಭವಿಸಿದ ಈ ದುರಂತದಿಂದ ಶಾಲಾ ವಾತಾವರಣದಲ್ಲಿ ಶೋಕ ಆವರಿಸಿದೆ.

ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಶಿಕ್ಷಣ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಂಡಿದ್ದಾರೆ. ಮೃತ ಶಿಕ್ಷಕರ ನಿಧನಕ್ಕೆ ಶಿಕ್ಷಕರ ವಲಯ ಹಾಗೂ ಗ್ರಾಮಸ್ಥರು ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *