ಹಾಸನ: ತಾಲ್ಲೂಕಿನ ಸಾಲಗಾಮೆ ಹೋಬಳಿ ಬೀಕನಹಳ್ಳಿ ಗ್ರಾಮದಲ್ಲಿರುವ ಶ್ರೀ ಚೌಡೇಶ್ವರಿ (ಪುರದಮ್ಮ) ದೇವಾಲಯದ ಜಾತ್ರಾ ಮಹೋತ್ಸವವನ್ನು ಮಾ. 19 ಮತ್ತು 20ರಂದು ಆಚರಿಸುವ ಕುರಿತು ಚರ್ಚಿಸಲು ಮಾ. 7ರಂದು ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.
ಜಾತ್ರಾ ಮಹೋತ್ಸವವನ್ನು ಧಾರ್ಮಿಕ ವಿಧಿವಿಧಾನಗಳ ಪ್ರಕಾರ ಎರಡು ದಿನಗಳ ಕಾಲ ಆಚರಿಸಲು ಸಾರ್ವಜನಿಕರಿಂದ ಕೋರಿಕೆ ಪತ್ರ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಈ ಸಭೆ ಕರೆಯಲಾಗಿದೆ. ಜಾತ್ರಾ ಮಹೋತ್ಸವದ ಪೂರ್ವ ಸಿದ್ಧತೆಗಳು ಹಾಗೂ ಮುಜುರಾಯಿ ಇಲಾಖೆಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ.
ಸಭೆಯು ಮಾ. 7ರಂದು ಮಧ್ಯಾಹ್ನ 2 ಗಂಟೆಗೆ ಪುರದಮ್ಮ ದೇವಾಲಯದ ಆವರಣದಲ್ಲಿ ದೇವಾಲಯದ ಆಡಳಿತಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಸಭೆಯಲ್ಲಿ ದೇವಾಲಯದ ವ್ಯವಸ್ಥಾಪನ ಸಮಿತಿಯ ಹಾಲಿ ಹಾಗೂ ಮಾಜಿ ಸದಸ್ಯರು, ಚುನಾಯಿತ ಪ್ರತಿನಿಧಿಗಳು, ವಿವಿಧ ಮುಖಂಡರು, ಗಣ್ಯರು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡುವಂತೆ ಮನವಿ ಮಾಡಲಾಗಿದೆ.
ಈ ಕುರಿತು ದೇವಾಲಯದ ಆಡಳಿತಾಧಿಕಾರಿ‌ ಯು.ಎಂ. ಪ್ರಕಾಶ್ ಕುಮಾರ್ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *