ಹಾಸನ: ಭಾರೀ ಸಂಚಲನ ಮೂಡಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ.
ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ವಿಶೇಷ ತನಿಖಾ ದಳ (SIT) ಚಾರ್ಜ್‌ಶೀಟ್ ಸಲ್ಲಿಸಿದೆ.
ಫೆಬ್ರವರಿ 19ರಂದು ಹಾಸನದ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ 13,712 ಪುಟಗಳ ವಿಶಾಲ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿದೆ.
2024ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಚುನಾವಣೆ ಏಜೆಂಟ್ ಆಗಿದ್ದ ವಕೀಲ ಪೂರ್ಣಚಂದ್ರ ನೀಡಿದ ದೂರಿನ ಆಧಾರದ ಮೇಲೆ ತನಿಖೆ ಕೈಗೊಳ್ಳಲಾಗಿತ್ತು.
ಪ್ರಕರಣದಲ್ಲಿ ಒಟ್ಟು 52 ಆರೋಪಿಗಳ ಹೆಸರು ದೋಷಾರೋಪಣೆ ಪಟ್ಟಿಯಲ್ಲಿ ಉಲ್ಲೇಖವಾಗಿದ್ದು, ಅವರಲ್ಲಿ 39 ಜನರ ವಿರುದ್ಧ ಆರೋಪಗಳನ್ನು ದೃಢಪಡಿಸಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ.
ಅಶ್ಲೀಲ ವಿಡಿಯೋ ಹಂಚಿಕೆಗಾಗಿ ಆರೋಪಿಗಳು ಸುಮಾರು 70 ಪೆನ್‌ಡ್ರೈವ್‌ಗಳನ್ನು ಖರೀದಿಸಿದ್ದರೆಂಬುದು ತನಿಖೆಯಲ್ಲಿ ಬಹಿರಂಗವಾಗಿದೆ. ಈ ಪೆನ್‌ಡ್ರೈವ್‌ಗಳನ್ನು ಹಾಸನದಲ್ಲೇ ಖರೀದಿಸಿದ್ದ ಮಾಹಿತಿ ಕೂಡ ಪತ್ತೆಯಾಗಿದೆ.
ಇದಲ್ಲದೆ, ವಿಚಾರಣೆ ವೇಳೆ 277 ಜನ ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿರುವುದಾಗಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.
ಪ್ರಕರಣ ಮುಂದಿನ ಹಂತದ ವಿಚಾರಣೆಗೆ ಸಾಗಿದ್ದು, ಮುಂದಿನ ನ್ಯಾಯಾಂಗ ಕ್ರಮಗಳತ್ತ ಎಲ್ಲರ ಗಮನ ನೆಟ್ಟಿದೆ.

Leave a Reply

Your email address will not be published. Required fields are marked *